SHARE

ವಾರಣಾಸಿ/ಬೆಳಗಾವಿ :ಬೆಳಗಾವಿ ಸಂಸದ ಸುರೇಶ ಅಂಗಡಿ ಮೋದಿ ಪರ ಪ್ರಚಾರಕ್ಕಾಗಿ ವಾರಣಾಸಿಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ ಕಾಶಿ ವಿಶ್ವನಾಥ ಮಂದಿರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಅವರು ನಂತರ ವಾರಣಾಸಿಯ ಜಂಗಮ ವಾಡಿ ಮಠಕ್ಕೆ ತೆರಳಿ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾ ಸ್ವಾಮಿಗಳ ಆಶೀರ್ವಾದ ಪಡೆದು ನರೇಂದ್ರ ಮೋದಿ ಯವರ ಪರ ಚುನಾವಣಾ ಪ್ರಚಾರ ನಡೆಸಿ ಮತಯಾಚನೆ  ಶುರುಮಾಡಿದರು.