SHARE

ಗುಜರಾತ್ : ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಎನ್​ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಅಂಕಿಅಂಶಗಳನ್ನ ಪರಿಗಣಿಸಿದ್ರೆ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರೋದು ನಿಸ್ಸಂದೇಹವಾಗಿದ್ದು, ಈಗಾಗಲೇ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಗಾಂಧಿನಗರದಲ್ಲಿ ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್​​​ ಮೋದಿ ಕೂಡ ತಮ್ಮ ಪುತ್ರ ಗೆಲ್ಲುವ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆ ಅವರು ತಮ್ಮ ನಿವಾಸದಿಂದ ಹೊರಬಂದು ಮಾಧ್ಯಮಗಳ ಕ್ಯಾಮೆರಾಗಳ ಮುಂದೆ ಕೈಮುಗಿದು ಧನ್ಯವಾದ ಅರ್ಪಿಸಿದ್ರು.

&nbsp