SHARE

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಉಂಟಾದ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್​ ಕ್ಯಾಂಪೇನ್ ಕಮೀಟಿ ಅಧ್ಯಕ್ಷ ಸ್ಥಾನಕ್ಕೆ ಹೆಚ್​​​.ಕೆ.ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. ನಮಗೆಲ್ಲರಿಗೂ ಇದು ಆತ್ಮಾವಲೋಕನ ಮಾಡಿಕೊಳ್ಳುವ ಸಮಯ. ರಾಜ್ಯದಲ್ಲಿ ಉಂಟಾದ ಸೋಲಿಗೆ ನೈತಿಕ ಹೊಣೆ ಹೊರುತ್ತೇನೆ. ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿ ಪಕ್ಷದ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ತಮಗೆಲ್ಲರಿಗೂ ಈ ಸಂದರ್ಭದಲ್ಲಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.