SHARE

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ನರೇಂದ್ರ ಮೋದಿ ನೇತೃತ್ವ ಎನ್​ಡಿಎ ದೇಶದ ಚುಕ್ಕಾಣಿ ಹಿಡಿಯಲಿದೆ. ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ನೂತನವಾಗಿ ಚುನಾಯಿತರಾದ ಎನ್​ಡಿಎ ಮೈತ್ರಿ ಕೂಟದ ಸಂಸದೀಯ ಮಂಡಳಿ ಸಭೆ ನಡೆಸಲಾಯ್ತು. ಈ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಸಂಸದೀಯ ನಾಯಕರನ್ನಾಗಿ ಆಯ್ಕೆ ಮಾಡಲಾಯ್ತು. ಇದೇ ಮೇ 30ರಂದು ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇವರೊಂದಿಗೆ ಕೆಲ ಸಂಸದರು ಕೇಂದ್ರ ಮಂತ್ರಿಗಳಾಗಿಯೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.