SHARE

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಸಂಜೆ ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚಿಸಿದರು. ಲೋಕಸಭಾ ಚುನಾವಣೆ ಫಲಿತಾಂಶ, ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳನ್ನು ತಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ಇನ್ನೂ ಉತ್ತಮ ಸಮನ್ವಯ ಸಾಧಿಸುವ ಮೂಲಕ ಸರ್ಕಾರ ಮುನ್ನಡೆಸಲು ಉಭಯ ಮುಖಂಡರು ತೀರ್ಮಾನಿಸಿದರು.