SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೇ 30ರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಅಂತಾ ರಾಷ್ಟ್ರಪತಿ ರಾಮನಾಥ್ ಕೋವಿಂದ್  ಟ್ವಿಟರ್​ನಲ್ಲಿ ತಿಳಿಸಿದ್ದಾರೆ.

ನಿನ್ನೆ ರಾತ್ರಿ ಮೋದಿ ರಾಷ್ಟ್ರಪತಿಗಳನ್ನ ಭೇಟಿಯಾಗಿ ಸರ್ಕಾರ ರಚನೆ ಮಾಡಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದರು. ಈ ಟ್ವೀಟ್​ ಮಾಡಿರುವ ರಾಷ್ಟ್ರಪತಿಗಳು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಟೀಂ ಮೇ 30 ರ ಸಂಜೆ 7 ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು, ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಯಾಱರು ಗಣ್ಯ ಅತಿಥಿಗಳಾಗಿ ಆಗಮಿಸುತ್ತಾರೆ ಅನ್ನೋದ್ರ ಬಗ್ಗೆ ಇನ್ನೂ ತಿಳಿದು ಬಂದಿಲ್ಲ.2014ರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಾರ್ಕ್​ (South Asian Association for Regional Cooperation)ನ ಎಲ್ಲಾ ರಾಷ್ಟ್ರಗಳಿಗೂ ಆಹ್ವಾನ ನೀಡಲಾಗಿತ್ತು.