SHARE

ಅಮೇಥಿ (ಉತ್ತರ ಪ್ರದೇಶ): ಸಂಸದೆ ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್ ಕೊಲೆ ಪ್ರಕರಣ ಸಂಬಂಧ 7 ಮಂದಿ ಶಂಕಿತ ಆರೋಪಿಗಳನ್ನ ಉತ್ತರ ಪ್ರದೇಶದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ನಂತರ ಸಿಎಂ ಯೋಗಿ ಆದಿತ್ಯನಾಥ್, ಹಂತಕರನ್ನ 24 ಗಂಟೆಯೊಳಗೆ ಪತ್ತೆ ಹಚ್ಚಬೇಕು ಅಂತಾ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಅದ್ರಂತೆ ಪ್ರಕರಣದ ಜಾಡು ಹಿಡಿದು ಹೊರಟಿದ್ದ ಉತ್ತರ ಪ್ರದೇಶದ ಪೊಲೀಸರು 7 ಮಂದಿ ಶಂಕಿತರನ್ನ ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಸಂಬಂಧ 7 ಮಂದಿ ಶಂಕಿತ ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರೋದು ಮೇಲ್ನೋಟಕ್ಕೆ ಕಂಡು ಬಂದಿದೆ. ವಿಚಾರಣೆ ನಡೆಸುತ್ತಿದ್ದೇವೆ ಎಂದು ಡಿಜಿಪಿ ಒಪಿ ಸಿಂಗ್ ಹೇಳಿದ್ದಾರೆ.

ಮೃತ ಸುರೇಂದ್ರ ಸಿಂಗ್ ಅವರ ಅಂತ್ಯಕ್ರಿಯೆ ಬರೌಲಿಯಲ್ಲಿ ನಡೆಯಿತು. ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಸ್ಮೃತಿ ಇರಾನಿ ಕೂಡ ಭಾಗವಹಿಸಿದ್ದರು. ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟು ಅಂತ್ಯಕ್ರಿಯೆ ನಡೆಯುವ ತನಕ ಇದ್ದರು. ನಂತರ ಸುರೇಂದ್ರ ಸಿಂಗ್ ಕುಟುಂಬದ ಸದಸ್ಯರ ಜೊತೆ ಮಾತುಕತೆ ನಡೆಸಿ ಸಾಂತ್ವನ ಹೇಳಿದರು.