SHARE
ದೆಹಲಿ: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ದಿಢೀರ್ ಬೆಳವಣಿಗೆಗಳ ಕಾರಣವಾಗಿ ಕಾಂಗ್ರೆಸ್ ಹೈ ಕಮಾಂಡ್ ಇಂದು ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಗೆ ಕರೆಸಿಕೊಂಡಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.ಕಾಂಗ್ರೆಸ್-ಜೆಡಿಎಸ್​ ಸಮ್ಮಿಶ್ರ ಸರ್ಕಾರ ಎಂಬುದು ಇಂದು ಅಕ್ಷರಶಃ ಗೊಂದಲದ ಗೂಡಾಗಿ ಬದಲಾಗಿದೆ.ಸಿದ್ದರಾಮಯ್ಯ ಬಣದ ವಿರುದ್ದ ಉಭಯ ಪಕ್ಷಗಳ ಕೆಲ ನಾಯಕರು ಆರೋಪಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ,ಆಕ್ರೋಶ ಹೊರಹಾಕುತ್ತಿದ್ದಾರೆ.ಈ ನಡುವೆ ದೆಹಲಿಗೆ ತೆರಳಿದ್ದ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಸಹ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಗೆ ನೇರವಾಗಿ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದ ಕುರಿತು ಚರ್ಚೆ ನಡೆಸಲು ಇಂದು ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದಾರೆ. ರಾಹುಲ್ ಗಾಂಧಿಯ ಈ ನಡೆ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.