SHARE

ಬೆಳಗಾವಿ:ಗಡಿ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡುವ ಕುರಿತು ಜಿಲ್ಲಾಧಿಕಾರಿ ಡಾ ಎಸ್. ಬಿ. ಬೊಮ್ಮನಹಳ್ಳಿಯವರನ್ನ ಭೇಟಿಯಾದ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್, ಗಡಿ ಭಾಗದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡುವ ಕೆಲಸವನ್ನ 2018 ರ ಸೆಪ್ಟೆಂಬರ್ ನಿಂದ ನಿಲ್ಲಿಸಲಾಗಿದೆ. ಸ್ಥಳೀಯ ಮಟ್ಟದಲ್ಲಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಈ ಹಿನ್ನಲೆಯಲ್ಲಿ ಪ್ರಮಾಣಪತ್ರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಸಕಾರಾತ್ಮಕ ಸ್ಪಂದನೆ ನೀಡಿರುವ ಜಿಲ್ಲಾಧಿಕಾರಿ, ತಹಸೀಲ್ದಾರರಿಗೆ ನಿರ್ದೇಶನ ನೀಡೋದಾಗಿ ತಿಳಿಸಿದ್ದಾರೆ.

ಈ ಯೋಜನೆಯಿಂದ ಅಥಣಿ, ನಿಪ್ಪಾಣಿ, ಯಮಕನಮರಡಿ, ಮತ್ತು ಖಾನಾಪುರ ವಲಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ಸಮಯದಲ್ಲಿ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್, ಮಾಜಿ ಸಚಿವ ವೀರಕುಮಾರ್ ಪಾಟೀಲ್ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮಣ್ ಚಿಂಗಳೆ ಹಾಜರಿದ್ದರು.