SHARE

ಕೊಳ್ಳೇಗಾಲ : ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸುಮಾರು 20 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಆನಂದಜ್ಯೋತಿ ನಿವಾಸಿ ಚಿತ್ರಗಾರ ಜೈರಾಜ್ ಪುತ್ರ ಸಚಿನ್(28) ಮೃತಪಟ್ಟ ದುರ್ಧೈವಿ. ಈತ ತನ್ನ ಬೈಕ್‌ನಲ್ಲಿ ನಗರದ ಎಂಜಿಎಸ್‌ವಿ ಕಾಲೇಜು ರಸ್ತೆಯಲ್ಲಿ ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬೈಕ್‌ನಿಂದ ಬಿದ್ದು ತೀವ್ರ ಗಾಯಗೊಂಡಿದ್ದನು. ತಲೆ ಕೈ ಕಾಲುಗಳಿಗೆ ತೀವ್ರ ಪೆಟ್ಟಾಗಿ ಮೈಸೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು.
ಕಳೆದ ಇಪ್ಪತ್ತು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಗಾಯಾಳು ಇಂದು ಕೊನೆಯುಸಿರೆಳೆದಿದ್ದಾನೆ. ಕೆ.ಆರ್.ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.
ಘಟನೆ ಸಂಬಂಧ ಮೃತನ ಸಹೋದರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.