SHARE

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕಾಂಗ್ರೆಸ್​ನಿಂದ ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್ ಬೇಗ್​ರನ್ನು ಅಮಾನತು ಮಾಡಲಾಗಿದೆ. ರೋಷನ್ ಬೇಗ್ ಇತ್ತೀಚೆಗೆ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ವಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಬೇಗ್ ವಿರುದ್ಧ ಕ್ರಮಕ್ಕೆದಿನೇಶ್ ಗುಂಡೂರಾವ್ ಹೈಕಮಾಂಡ್​ಗೆ ಒತ್ತಾಯಿಸಿದ್ದರು. ಈ ಹಿನ್ನೆಲೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಘೋರ್ಪಡೆ ಇಂದು ರೋಷನ್​ ಬೇಗ್​ರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶಿಸಿದ್ದಾರೆ.