SHARE

ಬೆಂಗಳೂರು, ಜೂನ್ 20: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ: ಜಿ.ಪರಮೇಶ್ವರ್ ಅವರು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು “ಮೈತ್ರಿ ಪರ್ವ” ಸರ್ಕಾರದ ಒಂದು ವರ್ಷದ ಸಾಧನೆ- ಪುಸ್ತಕವನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಆರೋಗ್ಯ ಸಚಿವ ಶಿವಾನಂದ ಎಸ್. ಪಾಟೀಲ್, ತೋಟಗಾರಿಕಾ ಸಚಿವ ಮನಗೂಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಡಾ: ಜಯಮಾಲಾ, ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ, ಸಚಿವ ಶಂಕರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು