SHARE

ಅಂಗನವಾಡಿ ಕೇಂದ್ರ ಮತ್ತು ಮಿನಿ ಅಂಗನವಾಡಿ ಕೇಂದ್ರಗಳನ್ನು ಕಿಂಡರ್ ಗಾರ್ಡನ್ನಗಳಾಗಿ ಮಾರ್ಪಡಿಸಿ ಇಂಗ್ಲೀಷ್ ಕಾನ್ವೆಂಟ್, ನರ್ಸರಿ ಸ್ಕೂಲಗಳಾಗಿ ಪರಿವರ್ತಿಸುವಂತೆ ಆಗ್ರಹಿಸಿ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಧರಣಿ ನಡೆಸಿದರು. ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮುಂದುವರೆಸಿದ ಅವರು ಅಂಗನವಾಡಿ ನರ್ಸರಿ ಶಾಲೆಗಳಿಂದ ಸರ್ಟಿಫಿಕೆಟ್ ಪಡೆದಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರಾಥಮಿಕ ಶಾಲೆಗೆ ಪ್ರವೇಶ ನೀಡುವಂತೆ ಆದೇಶ ಹೊರಡಿಸಬೇಕು. ಮಕ್ಕಳಿಗೆ ಇಂಗ್ಲೀಷ್ ಕಲಿಸುವ, ಜ್ಞಾನವಂತರನ್ನಾಗಿ ಮಾಡುವ ಇಂಗ್ಲೀಷ್ ಜ್ಞಾನವನ್ನು ನಾವು ಹೊಂದಿದ್ದೇವೆ. ಆದ್ದರಿಂದ ಅಂಗನವಾಡಿ ಕೇಂದ್ರಗಳನ್ನು ಇಂಗ್ಲೀಷ್ ಕಾನ್ವೆಂಟಗಳಾಗಿ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಚ್.ಕೆ. ರಾಮಚಂದ್ರಪ್ಪ, ಎನ್. ಶಿವಣ್ಣ, ಎಂ. ಜಯಮ್ಮ, ಎಂ.ಬಿ. ಶಾರದಮ್ಮ, ಲತೀಫ್ ಬಾಗಲಕೋಟಿ, ಕೆ.ಸಿ. ವಿಜಯಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.