SHARE

ಬೆಳಗಾವಿ: ಸಮ್ಮಿಶ್ರ ಸರ್ಕಾರದಲ್ಲಿ ರಾಜೀನಾಮೆ ಪರ್ವ ಹಿನ್ನೆಲೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜೀನಾಮೆ ನೀಡಿದ ಶಾಸಕರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಗಳು ಹರಿದಾಡುತ್ತಿದ್ದು, ಶಾಸಕ ರಮೇಶ ಜಾರಕಿಹೊಳಿ ಆಪ್ತ ಅಥಣಿ ಶಾಸಕ ಮಹೇಶ ಕುಮಟೊಳ್ಳಿ ವಿರುದ್ಧ ಅವಹೇಳನ ಕಾರಿ ಪೋಸ್ಟ್ ಹಾಕಲಾಗಿದ್ದು ಚರ್ಚೆಗೆ ಗ್ರಾಸವಾಗಿದೆ.
ಶಾಸಕ ಕುಮಠೊಳ್ಳಿ ಪಂಚಮಸಾಲಿ ಅಲ್ಲ ಇವನು ಕ್ರಾಸ್ ಬೀಡು ಇರಬೇಕು ಎಂಬ ವಾಕ್ಯ ಬಳಸಲಾಗಿದೆ. ಕುಮಟೊಳ್ಳಿಗೆ ಭಾವಪೂರ್ಣ ಶೃದ್ಧಾಂಜಲಿ ಅರ್ಪಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಶ್ರೀಶೈಲ ಪಡಗಲ್ ಎಂಬುವುದರಿಂದ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಅತ್ತ ಖಾನಾಪುರ ದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ. ಅತೃಪ್ತ ಶಾಸಕರ ಜೊತೆಗೆ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಸಭೆ ಕರೆದ ಕಾಂಗ್ರೆಸ್ ಕಾರ್ಯಕರ್ತರು ಸಮಾಲೋಚನೆ ನಡೆಸಿದ್ದಾರೆ.